Breaking
8 Aug 2026, Sat

ಬೆಸ್ಟ್ ಎಂಎಲ್‌ಎ ಪ್ರಶಸ್ತಿ: ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಯುವಮೋರ್ಚಾದಿಂದ ಗೌರವಾರ್ಪಣೆ

ಬೆಳ್ತಂಗಡಿ: ರಾಜ್ಯದ ಪ್ರತಿಷ್ಠಿತ ವಾರ್ತಾವಾಹಿನಿ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ‘ಬೆಸ್ಟ್ ಎಂಎಲ್‌ಎ’ ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ರಾಜ್ಯದ ಪ್ರತಿಷ್ಠಿತ ವಾರ್ತಾವಾಹಿನಿ ಕರ್ನಾಟಕ ಟಿವಿ ವತಿಯಿಂದ ಬೆಳ್ತಂಗಡಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಾಗೂ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ ಹರೀಶ್ ಪೂಂಜ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆ.8ರಂದು ಅವರ ಸ್ವಗೃಹ ಮಿಥಿಲಾದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಈ ಪ್ರಶಸ್ತಿ ಕೇವಲ ಶಾಸಕರಿಗೆ ಮಾತ್ರವಲ್ಲದೆ, ಬೆಳ್ತಂಗಡಿ ತಾಲೂಕಿನ ಪ್ರತಿಯೊಬ್ಬ ನಾಗರಿಕನಿಗೂ ದೊರೆತ ಗೌರವವಾಗಿದೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಜಿಲ್ಲಾ ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್ ಮರೋಡಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರುಗಳಾದ ಗಣೇಶ್ ಆರ್ ಲಾಯಿಲ, ಹರೀಶ್ ಗೌಡ ಸಂಭೋಲ್ಯ, ಪ್ರಕಾಶ್ ಪೂಜಾರಿ ಬಾರ್ಯ, ಸುಜಿತ್ ಪೆರಾಡಿ, ಕಾರ್ಯದರ್ಶಿಗಳಾದ ಗಿರೀಶ್ ಗೌಡ. ಬಿ.ಕೆ. ಬಂದಾರು, ಸುಧೀರ್ ಪೂಜಾರಿ ಚಾರ್ಮಾಡಿ, ರಂಜು ಕೊಕ್ಕಡ, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ-ಕುಕ್ಕಳ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅಶ್ವಿನ್ ಅಂಡಿಂಜೆ, ಪ್ರಸಾದ್ ಸುಧೇಮುಗೇರು, ಮನೀಷ್ ಡಿ. ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ ನಗರ, ಪ್ರದೀಪ್ ಕುಲಾಲ್ ಕಾಯರ್ತಡ್ಕ, ಸಂತೋಷ್ ಕುಮಾರ್ ಇಂದಬೆಟ್ಟು, ಪವನ್ ಶೆಟ್ಟಿ ಉಜಿರೆ ಹಾಗೂ ಮಹಾಶಕ್ತಿ ಪ್ರಮುಖರಾದ ಲೋಕ್ಷತ್, ಹರೀಶ್ ಕಾಶಿಪಟ್ಣ, ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *