Breaking
25 Sep 2026, Fri

ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ

ಮಂಗಳೂರು: ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಾ ತಡರಾತ್ರಿ ಸಂಚರಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಹಾಗೂ ಮಂಚಿಲ ನಿವಾಸಿ ಅಶ್ಪಕ್ (28) ಎಂದು ಗುರುತಿಸಲಾಗಿದೆ. ಶಾಕಿರ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರೆ, ಅಶ್ಪಕ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಅಶ್ಪಕ್ ವಿರುದ್ಧ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಶನಿವಾರ ತಡರಾತ್ರಿ ಸುಮಾರು 12.15ರ ವೇಳೆಗೆ ತೊಕ್ಕೊಟ್ಟಿನ ಬಾರ್ವೊಂದರ ಬಳಿ ಇಬ್ಬರೂ ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕವಾಗಿ ಓಡಾಡುತ್ತಾ, ಸ್ಥಳೀಯರಿಗೆ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ.


ಈ ಕುರಿತು ಮಾಹಿತಿ ಪಡೆದ ಉಳ್ಳಾಲ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳಿಂದ ತಲವಾರನ್ನು ವಶಕ್ಕೆ ಪಡೆಯಲಾಗಿದೆ.


ತಲವಾರು ಬಳಕೆ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪದಡಿ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *