Breaking
10 Aug 2026, Mon

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನಗಳ ಪೊಲೀಸ್ ಕಸ್ಟಡಿ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಬಂಧಿತ ಆರೋಪಿಗಳಾದ ಉತ್ತರಾಖಂಡ ಮೂಲದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಈ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಅವರು ಸೋಮವಾರ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

ಪೊಲೀಸರ ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶ ಪುರುಷೋತ್ತಮ್ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಹಾಗೂ ಪ್ರಕರಣದ ತನಿಖೆಯನ್ನು ಮುಂದುವರಿಸಲು ಪೊಲೀಸರು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *