Breaking
25 Sep 2026, Fri

ಉದ್ಯಾವರ: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ; ಪ್ರಯಾಣಿಕರು ಪಾರು

ಉದ್ಯಾವರ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆ.10ರಂದು ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಎರಡೂ ಬಸ್‌ಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.

Leave a Reply

Your email address will not be published. Required fields are marked *