Breaking
25 Sep 2026, Fri

ರಾಯಚೂರು: ಎಪಿಎಂಸಿ ಗೋದಾಮಿನಲ್ಲಿ ಅಗ್ನಿ ಅವಘಡ; ₹30 ಲಕ್ಷ ಮೌಲ್ಯದ ಸಾಮಗ್ರಿಗಳು ಭಸ್ಮ

ರಾಯಚೂರು: ನಗರದ ಎಪಿಎಂಸಿ ಪಟೇಲ್‌ಗಂಜ್‌ನಲ್ಲಿ ಗೋದಾಮೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಅಪಾರ ಪ್ರಮಾಣದ ಧಾನ್ಯ ಹಾಗೂ ವಿವಿಧ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಮಂಗಳವಾರ(ಆ.11) ನಡೆದಿದೆ.

ಸ್ಥಳೀಯ ವರ್ತಕ ರಾಜು ಪಾಟೀಲ್ ಅವರಿಗೆ ಸೇರಿದ ‘ರಾಜಾರಾಮ್ ಟ್ರೇಡರ್ಸ್’ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಒಣ ಕೊಬ್ಬರಿ, ವಿವಿಧ ಬಗೆಯ ಡ್ರೈಫ್ರೂಟ್ಸ್ ಗಳು, ಪೂಜಾ ಸಾಮಗ್ರಿಗಳು ಹಾಗೂ ಕಿರಾಣಿ ದಿನಸಿ ವಸ್ತುಗಳು, ದವಸ ಧಾನ್ಯಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಸುಮಾರು ₹30 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *