Breaking
25 Sep 2026, Fri

ಉಜಿರೆ: ಸರ್ಕಾರಿ ಬಸ್–ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸಾವು, ಸಹಸವಾರ ಗಂಭೀರ

ಉಜಿರೆ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನೀರಚಿಲುಮೆ ಬಳಿ ಆ.11ರಂದು ನಡೆದಿದೆ.

ಮೃತರನ್ನು ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಸನತ್ (30) ಎಂದು ಗುರುತಿಸಲಾಗಿದೆ. ಸಹಸವಾರ ಭರತ್ ಬಳ್ಳಮಂಜ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನೀರಚಿಲುಮೆ ಬಸ್ ನಿಲ್ದಾಣದ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಘಟನೆಯಿಂದ ಧರ್ಮಸ್ಥಳ–ಉಜಿರೆ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು.

Leave a Reply

Your email address will not be published. Required fields are marked *