ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ತಿಂಗಳ ಸಭೆಯೊಂದಿಗೆ ‘ಆಟಿಡ್ ಒಂಜಿ ವಿಶೇಷ ತಿನಸ್’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಹಾಗೂ ಬೆಳ್ತಂಗಡಿ ಮಂಡಲದ ಪ್ರಭಾರಿ ಕಮಲಾಕ್ಷಿ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಜಿಲ್ಲಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್ ಹಾಗೂ ತುಳಸಿ ಉಮೇಶ್ ಸೇರಿದಂತೆ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ ಅನನ್ಯ ಜವಾಬ್ದಾರಿಯುತ ಸದಸ್ಯರು ಉಪಸ್ಥಿತರಿದ್ದರು.

ಆಟಿ ತಿಂಗಳ ವಿಶೇಷತೆಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿಯೊಬ್ಬರೂ ತಮ್ಮ ಮನೆಯಿಂದ ಸಿದ್ಧಪಡಿಸಿಕೊಂಡು ಬಂದಿದ್ದ ಸುಮಾರು 25 ಬಗೆಯ ಸಾಂಪ್ರದಾಯಿಕ ತಿನಿಸುಗಳನ್ನು ಪರಸ್ಪರ ಹಂಚಿಕೊಂಡು ಸವಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಮಲಾಕ್ಷಿ ಅವರು, ಆಟಿ ತಿಂಗಳ ವಿಶೇಷತೆ ಹಾಗೂ ಹಿಂದಿನ ಕಾಲದ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ತಾಯಂದಿರ ಮೇಲಿದೆ. ಮಕ್ಕಳಿಗೆ ನಮ್ಮ ನಾಡಿನ ಸಂಸ್ಕೃತಿ, ಆಹಾರ ಪದ್ಧತಿ ಹಾಗೂ ಸಂಪ್ರದಾಯಗಳ ಮಹತ್ವವನ್ನು ತಿಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನು ಶಾರದಾ ಸ್ವಾಗತಿಸಿದರು. ಮಂಜುಳಾ ನಡ ಧನ್ಯವಾದ ಸಲ್ಲಿಸಿದ್ದು, ತುಳಸಿ ನಿರೂಪಿಸಿದರು.






