Breaking
29 Sep 2026, Tue

ಜಪ್ಪಿನಮೊಗರಿನಲ್ಲಿ ಮನೆ ಕಳ್ಳತನ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರಿನ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಮಹಾರಾಷ್ಟ್ರದ ಸಾಂಗ್ಲಿಯ ಸಮಧನ ಸಕಹರಿ ನರಳೆ (26) ಬಂಧಿತ ಆರೋಪಿ. ಆ.4ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳನುಗ್ಗಿದ ಆರೋಪಿ, ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ₹25 ಸಾವಿರ ನಗದನ್ನು ಕಳವು ಮಾಡಿದ್ದಾನೆ ಎನ್ನಲಾಗಿದೆ.


ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಆ.11ರಂದು ತಲಪಾಡಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.


ಆತನಿಂದ ಕಳವು ಮಾಡಿದ್ದ ಸೊತ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *