Breaking
29 Sep 2026, Tue

ಸುಳ್ಯ: ಅರಣ್ಯ ಇಲಾಖೆ ಬೊಲೆರೊ–ಗೂಡ್ಸ್ ರಿಕ್ಷಾ ನಡುವೆ ಅಪಘಾತ

ಸುಳ್ಯ: ನಗರದ ಹಳೇಗೇಟು ಬಳಿ ಅರಣ್ಯ ಇಲಾಖೆಯ ಬೊಲೆರೊ ವಾಹನ ಹಾಗೂ ಗೂಡ್ಸ್ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಕೆಲಕಾಲ ಸಂಚಾರಕ್ಕೆ ಅಡಚಣೆಯಾದ ಘಟನೆ ಆ.12ರ ಬುಧವಾರ ಸಂಜೆ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಅರಣ್ಯ ಇಲಾಖೆಯ ಬೊಲೆರೊ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.

ಅಪಘಾತದ ಬಳಿಕ ಎರಡೂ ವಾಹನಗಳು ರಸ್ತೆಯ ಮಧ್ಯಭಾಗದಲ್ಲಿ ನಿಂತಿದ್ದರಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ರಿಕ್ಷಾ ಚಾಲಕ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Leave a Reply

Your email address will not be published. Required fields are marked *