Breaking
29 Sep 2026, Tue

ಕುಧ್ರೆಬೆಟ್ಟು ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಬಾಲ್ತಿಲ ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಕಲ್ಲಡ್ಕ ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕುಧ್ರೆಬೆಟ್ಟು ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.


ಶಾಲಾ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಶಾಲಾ ಮುಖ್ಯ ಶಿಕ್ಷಕಿ ದೇವಿಕ, ಒಕ್ಕೂಟ ಅಧ್ಯಕ್ಷೆ ಉಮಾವತಿ ಪೂರ್ಲಿಪಡಿ, ಸೇವಾ ಪ್ರತಿನಿಧಿಗಳಾದ ವಿದ್ಯಾ, ಕಲ್ಲಡ್ಕ ವಲಯ ನಿಯೋಜಿತ ಅಧ್ಯಕ್ಷ ಚಿದಾನಂದ ಸುವರ್ಣ ಪಟ್ಟೆಕೋಡಿ, ಒಕ್ಕೂಟದ ನಿಯೋಜಿತ ಅಧ್ಯಕ್ಷ ಮಾಧವ ಸಾಲಿಯಾನ್, ನಿಯೋಜಿತ ಕಾರ್ಯದರ್ಶಿ ರಮೇಶ್ ಕುಧ್ರೆಬೆಟ್ಟು, ಶಿಕ್ಷಕಿಯರಾದ ಸುಮಿತ್ರಾ, ಅಮಿತಾ, ವಿಶಾಲಾಕ್ಷಿ, ಪ್ರೇಕ್ಷಾ, ಅಂಗನವಾಡಿ ಶಿಕ್ಷಕಿ ಸುರೇಖಾ, ಸಹಾಯಕಿ ಜಯಂತಿ, ವಾಸುದೇವ, ದಯಾನಂದ, ಶಂಕರ ಸುವರ್ಣ ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಒಕ್ಕೂಟ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *