Breaking
29 Sep 2026, Tue

ಮಂಗಳೂರು: ಸ್ಕೂಟರ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು

ಮಂಗಳೂರು: ಹೊರವಲಯದ ವಳಚಿಲ್‌ನಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

ಅತಿವೇಗವಾಗಿ ಚಲಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸವಾರ ಹಾರಿಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *