Breaking
29 Sep 2026, Tue

ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್: ಕಾರ್ಕಳದ ಶೈನಿ ಅಸ್ಮಾ ಸಲ್ಡಾನಾ ಸಾಧನೆ

ಕಾರ್ಕಳ: ಕೌಡೂರು ರಂಗನಪಲ್ಕೆಯ ಶೈನಿ ಅಸ್ಮಾ ಸಲ್ಡಾನಾ ಅವರು ವಾಣಿಜ್ಯ ಪೈಲಟ್ ಪರವಾನಗಿ (CPL) ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಅಶೋಕ್ ಜಾಕೋಬ್ ಸಲ್ಡಾನಾ ಹಾಗೂ ಮರಿಯಾ ಗ್ರೆಟ್ನಾ ಸಲ್ಡಾನಾ ದಂಪತಿಯ ಪುತ್ರಿಯಾಗಿರುವ ಶೈನಿ, ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದಿದ್ದಾರೆ.


ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಹಾಗೂ ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ ಶೈನಿ, ಬಾಲ್ಯದಿಂದಲೇ ವಿಮಾನಯಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದರು. ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಉದ್ದೇಶದಿಂದ ಬೆಂಗಳೂರಿನಲ್ಲಿ ನಡೆದ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ ಪ್ರವೇಶ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದರು.


ಬಳಿಕ 2023ರ ಆಗಸ್ಟ್ನಿಂದ ಉತ್ತರಪ್ರದೇಶದ ಫುರ್ಸತ್ಗಂಜ್ನಲ್ಲಿರುವ ಪ್ರತಿಷ್ಠಿತ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯಲ್ಲಿ ಕಠಿಣ ವೃತ್ತಿಪರ ಪೈಲಟ್ ತರಬೇತಿ ಪಡೆದು ಇದೀಗ ವಾಣಿಜ್ಯ ಪೈಲಟ್ ಪರವಾನಗಿ ಗಳಿಸಿದ್ದಾರೆ.


ಶೈನಿ ಅವರ ಈ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *