Breaking
14 Aug 2026, Fri

ಬಂಟ್ವಾಳ: ಎಂಡಿಎಂಎ, ಗಾಂಜಾ ಸಾಗಾಟ; ಗಾಂಜಾ ಸಹಿತ ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಎಂಡಿಎಂಎ ಹಾಗೂ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾವಳಪಡೂರು ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರು ತಾಲೂಕಿನ ಅಡ್ಯಾರ್ ನಾ ನಾಶೀರ್ ಹುಸೇನ್ (37), ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಮಹಮ್ಮದ್ ಜುನೈದ್ (38) ಹಾಗೂ ಮಂಗಳೂರು ತಾಲೂಕಿನ ಕಂಕನಾಡಿಯ ಮೊಹಮ್ಮದ್ ಅಫ್ರೀದಿ (24) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ–ಪುಂಜಾಲಕಟ್ಟೆ ಮಾರ್ಗದ ಆಲಂಪುರಿ ಸಾಲುಮರದ ತಿಮ್ಮಕ್ಕ ರಾಷ್ಟ್ರೀಯ ಉದ್ಯಾನವನದ ಬಳಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ರನ್ನಗೌಡ ಎನ್. ಪಾಟೀಲ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸ್ವಿಫ್ಟ್ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಎಂಡಿಎಂಎ ಹಾಗೂ ಗಾಂಜಾ ಪತ್ತೆಯಾಗಿದೆ.

ಬೆಂಗಳೂರಿನಿಂದ ಅಪರಿಚಿತ ವ್ಯಕ್ತಿಯೊಬ್ಬರಿಂದ ಎಂಡಿಎಂಎ ಮತ್ತು ಗಾಂಜಾವನ್ನು ಖರೀದಿಸಿ, ಶೇಖರಿಸಿಟ್ಟು ಗ್ರಾಹಕರಿಗೆ ಮಾರಾಟ ಮಾಡಲು ತಂದಿರುವುದಾಗಿ ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಿಳಿಸಿದ್ದಾರೆ.

ಆರೋಪಿಗಳಿಂದ 225 ಲಕ್ಷ ರೂ. ಮೌಲ್ಯದ 22.57 ಗ್ರಾಂ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಅಂದಾಜು ರೂ.2 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 5 ಮೊಬೈಲ್ ಫೋನ್‌ಗಳು ಸೇರಿದಂತೆ 4.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಒಟ್ಟು ರೂ.2,87,312 ಮೌಲ್ಯದ ಮಾದಕ ವಸ್ತುಗಳು ಹಾಗೂ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *