ವಿಟ್ಲ: ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿದ್ದ ಪುಣಚ ಗ್ರಾಮದ ಮೂಡಂಬೈಲು ಹರಿಕೃಷ್ಣ ಶೆಟ್ಟಿ (62) ಗುರುವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪುಣಚ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರ ಮನೆಗೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎಸ್.ಆರ್. ರಂಗಮೂರ್ತಿ, ಚನಿಲ ತಿಮ್ಮಪ್ಪ ಶೆಟ್ಟಿ, ಅರುಣ್ ಕುಮಾರ್ ಪುತ್ತಿಲ, ಎಂ.ಎಸ್.ಮಹಮ್ಮದ್ ಇನ್ನಿತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.




