Breaking
21 Mar 2026, Sat

ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ

ವಿಟ್ಲ: ವೀರಕಂಬ ಸರಹದ್ದಿನ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಚಾರದಲ್ಲಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಒಂದು ಸುತ್ತಿನ ವಿಚಾರಣೆ ನಡೆದಿದೆನ್ನಲಾಗಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕನಿಂದಲೇ ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ೧೦ ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ಶಿಕ್ಷಕ ವಿಕೃತಿಯನ್ನು ಮೆರೆದಿದ್ದಾನೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ. ವಿಟ್ಲ ಪೊಲೀಸ್ ಠಾಣೆಗೂ ಹೆತ್ತವರು ಈ ಬಗ್ಗೆ ದೂರು ನೀಡಿದ್ದಾರೆ. ಪೊಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *