Breaking
17 Aug 2025, Sun

“ಗುಬ್ಬಚ್ಚಿ ಗೂಡು ಅಭಿಯಾನ” 302 ನೇ ಕಾರ್ಯಕ್ರಮ: ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ: ನಿತ್ಯಾನಂದ ಶೆಟ್ಟಿ

ಬಂಟ್ವಾಳ : ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ, ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಭೂಮಿಯಲ್ಲಿರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲನಗಲ ಉಳಿವಿಗಾಗಿ ಸಸ್ಯ ರಾಶಿಗಳ ಮಹತ್ವದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಪಕ್ಷಿಗಳ ಸಂರಕ್ಷಣೆ, ಅಗತ್ಯತೆ ಬಗ್ಗೆ ಮಾಹಿತಿ ನೀಡುವ ಗುಬ್ಬಚ್ಚಿ ಗೂಡು ಅಭಿಯಾನ 302 ನೇ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುಬ್ಬಚ್ಚಿ ಗೂಡು ಕಾರ್ಯಕ್ರಮದ ಸಂಚಾಲಕಿ ರಮ್ಯಾ ನಿತ್ಯಾನಂದ ಶೆಟ್ಟಿ ಪಕ್ಷಿಗಳಿಗೆ ವಾಸಿಸಲು ನೈಸರ್ಗಿಕ ಗೂಡು ತಯಾರಿ,ನೀರು ಆಹಾರ ನೀಡುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷೆ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಾಲಾಬಿವೃದ್ದಿ ಸಮಿತಿಯ ಸದಸ್ಯರು, ಮಕ್ಕಳ ಪೋಷಕರು, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಡಾ.ತ್ರಿವೇಣಿ ರಮೇಶ್ ಸ್ವಾಗತಿಸಿ, ಸಹ ಶಿಕ್ಷಕ ಉದಯಚಂದ್ರ ವಂದಿಸಿ,ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದೀಕ್ಷಾ ಸಹಕರಿಸಿದರು.

Leave a Reply

Your email address will not be published. Required fields are marked *