Breaking
15 Aug 2026, Sat

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ದೇಶದ ಏಕತೆ, ಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *