Breaking
29 Sep 2026, Tue

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮಹಮ್ಮದ್ ಶರೀಪ್ ಬಂಧನ

ಬೆಳ್ತಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ವೇಣೂರು ಪೊಲೀಸರು ಆ.13ರಂದು ಬಂಧಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಮಹಮ್ಮದ್ ಶರೀಪ್ (46) ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವೇಣೂರು ಠಾಣಾ ಪೊಲೀಸರ ತಂಡ ಆ.13ರಂದು ಆತನನ್ನು ದಸ್ತಗಿರಿ ಮಾಡಿದೆ. ಬಳಿಕ ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *