Breaking
16 Aug 2026, Sun

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು 80ನೇ ಸ್ವಾತಂತ್ರ್ಯ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರರ ಎಜುಕೇಷನಲ್ ಟ್ರಸ್ಟ್ (ರಿ.) ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಗಳ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15, 2026ರಂದು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಬಬಿತಾ ರೋಹಿನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಶ್ರೀಮತಿ ಶಿವಾನಿ ಆರ್. ನಾಥ್, ಟ್ರಸ್ಟಿ ಶ್ರೀ ಯಜ್ಞೇಶ್ ರಾಜ್, ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಹಾಗೂ ಸಂಯೋಜಕರಾದ ಯಶವಂತ್ ಜಿ. ನಾಯಕ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಾ ಕೆ. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಸ್ವಾತಂತ್ರ್ಯದ ಮಹತ್ವವನ್ನು ಸ್ಮರಿಸಿದರು.

ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸಾರಿದರು. ದೇಶದ ಏಕತೆ, ಶಾಂತಿ ಮತ್ತು ಪ್ರಗತಿಗಾಗಿ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಿದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಶ್ರೀ ಸ್ವಾಗತಿಸಿದರು. ಸಹಶಿಕ್ಷಕಿಯರಾದ ಕುಶಲಾ ಟಿ. ಹಾಗೂ ಸಂಗೀತಾ ಕಾರ್ಯಕ್ರಮ ನಿರೂಪಿಸಿದರು.

ದೇಶಭಕ್ತಿ ಹಾಗೂ ಹೆಮ್ಮೆಯ ಭಾವನೆ ಮೂಡಿಸುವ ಘೋಷವಾಕ್ಯಗಳೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *