Breaking
8 Oct 2026, Thu

ಕಟಪಾಡಿ: ಫುಟ್‌ಬೋರ್ಡ್‌ನಲ್ಲಿ ನಿಂತು ಅಪಾಯಕಾರಿ ಪ್ರಯಾಣ; ಕ್ರಮಕ್ಕೆ ಆಗ್ರಹ

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರಿನಿಂದ ಕಟಪಾಡಿ–ಉಡುಪಿ ಕಡೆಗೆ ತೆರಳುತ್ತಿದ್ದ ವೇಗದೂತ ಬಸ್‌ನಲ್ಲಿ ವಿದ್ಯಾರ್ಥಿಗಳು ಫುಟ್‌ಬೋರ್ಡ್‌ನಲ್ಲಿ ನಿಂತು ದೇಹವನ್ನು ಬಸ್‌ನಿಂದ ಹೊರಚಾಚಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸಿದ ಘಟನೆ ಆ.14ರಂದು ಬೆಳಗ್ಗೆ ಕಂಡುಬಂದಿದೆ.

ಬಸ್ ಚಾಲಕ ಅತಿವೇಗವಾಗಿ ಇತರ ವಾಹನಗಳನ್ನು ಹಿಂದಿಕ್ಕುತ್ತಾ ಸಾಗುತ್ತಿದ್ದ ವೇಳೆ ವಿದ್ಯಾರ್ಥಿಗಳು ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಉದ್ಯಾವರ ಹೊಳೆಯ ಮೇಲ್ಸೇತುವೆ ಬಳಿಯೂ ವಿದ್ಯಾರ್ಥಿಗಳು ಇದೇ ರೀತಿ ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿದ್ದು, ಕೈಹಿಡಿತ ತಪ್ಪಿದರೆ ನೇರವಾಗಿ ಪಾಪನಾಶಿನಿ ಹೊಳೆಗೆ ಬೀಳುವ ಸಾಧ್ಯತೆಯಿದೆ ಎಂದು ಪ್ರತ್ಯಕ್ಷದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ, ಬಸ್ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಸಂಬಂಧ ಬಸ್ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *