ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಇಂದು (ಆ.15) ನಡೆದಿದೆ.

ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.




