Breaking
8 Oct 2026, Thu

ದ.ಕ.ಜಿ.ಪಂ.ಹಿ.ಪ್ರಾ. ಶಾಲೆ .ಮಜಿ ವೀರಕಂಭದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕಲ್ಲಡ್ಕ : ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ,ವೀರಕಂಭ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು.


ಎಸ್‌ಡಿಎಂಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ರವರು ಧ್ವಜಾರೋಹಣ ನೆರವೇರಿಸಿದರು, ಬಳಿಕ ಮಕ್ಕಳಿಂದ ಘೋಷಣೆಗಳು ಸಾಮೂಹಿಕ ಕವಾಯಿತುಗಳು ನಡೆದವು. ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಕೆಎಂಎಫ್ ವಿಸ್ತರಣಾಧಿಕಾರಿ ಜಗದೀಶ ಎ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್, ನಿಕಟ ಪೂರ್ವ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಮೂಲ್ಯ, ಮಾತೃಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ರಮೇಶ್ ಮೈರಾ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಗಾಯತ್ರಿ, ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ ಹಾಜರಿದ್ದರು .


ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಕ್ಕಳ ಪೋಷಕರು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾ ಅಭಿಮಾನಿಗಳು, ಶಿಕ್ಷಕವೃಂದವರು ಹಾಜರಿದ್ದರು.

Leave a Reply

Your email address will not be published. Required fields are marked *