ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶ ಆ.16ರಂದು ಬಿ.ಸಿ.ರೋಡಿನ ಲಯನ್ಸ್ ಕ್ಲಬ್‌ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ರೊನಾಲ್ಡ್ ಡಿಸೋಜ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುತ್ತಿರುವ ಕಾರ್ಯಕ್ರಮಗಳು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ವಸಂತಿ ಗಂಗಾಧರ ವಹಿಸಿದ್ದರು. ಒಕ್ಕೂಟದ ಜವಾಬ್ದಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿ ಧರ್ಮಸ್ಥಳದ ಮೀಡಿಯಾ ಹಾಗೂ ಸಂವಹನ ವಿಭಾಗದ ನಿರ್ದೇಶಕ ಪ್ರದೀಪ್ ಹಸ್ತಾಂತರಿಸಿದರು.

ನ್ಯಾಯವಾದಿ ಶೈಲಜಾ ರಾಜೇಶ್ ಸಮಾಜದಲ್ಲಿ ಮಹಿಳೆಯರ ಪಾತ್ರದ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ, ವಲಯ ಜನಜಾಗೃತಿ ಅಧ್ಯಕ್ಷ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಗಣೇಶ್ ಶೆಟ್ಟಿಗಾರ್ ಹಾಗೂ ಚಿತ್ರಲೇಖ ಉಪಸ್ಥಿತರಿದ್ದರು.

ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಶಿವಲಕ್ಷ್ಮಿ ಸ್ವಾಗತಿಸಿದರು. ಒಕ್ಕೂಟದ ಸಾಧನಾ ವರದಿಯನ್ನು ಸೇವಾ ಪ್ರತಿನಿಧಿ ಸುಲೋಚನಾ ವಾಚಿಸಿದರು. ಆಂತರಿಕ ಲೆಕ್ಕಪರಿಶೋಧಕ ಸುಬ್ರಾಯ ನಾಯ್ಕ್ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸ್ವ-ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.





