Breaking
10 Oct 2026, Sat

ಉಪ್ಪಿನಂಗಡಿ: ಬಸ್ ನಿಲ್ದಾಣ ಸಂಪರ್ಕ ರಸ್ತೆ: NHAI–ಲೋಕೋಪಯೋಗಿ ಇಲಾಖೆ ಜಂಟಿ ವೀಕ್ಷಣೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿ ವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ NHAI ವ್ಯಾಪ್ತಿ ಮುಗಿದ ಬಳಿಕ ಉಳಿದ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮೂಲಕ ಮುಂದುವರಿಸುವ ಕುರಿತು ಅಧಿಕಾರಿಗಳು ಚರ್ಚಿಸಿದರು.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳುವುದು ಹಾಗೂ ಮುಂದಿನ ದಿನಗಳಲ್ಲಿ ರಸ್ತೆಯನ್ನು ಚತುಷ್ಪಥಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರ್ದೇಶನದ ಮೇರೆಗೆ ಸ್ಟ್ರಕ್ಚರಲ್ ಇಂಜಿನಿಯರ್ ಪ್ರಸನ್ನ ದರ್ಬೆ ಅವರು ಎರಡೂ ಇಲಾಖೆಗಳ ಅಧಿಕಾರಿಗಳನ್ನು ಒಟ್ಟುಗೂಡಿಸಿ ಮುಂದಿನ ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಿದರು.

ಜಂಟಿ ವೀಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ್ ರೈ, NHAI ಅಧಿಕಾರಿಗಳು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಪಿಡಿಒ ವಿಲ್ಫ್ರೆಡ್, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಮಜಲ್, ಪುತ್ತೂರು ಗ್ರಾಮಾಂತರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದೇಶ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಧನಂಜಯ ನೆಟ್ಟಿಬೈಲ್, ಯು.ಟಿ. ತೌಸೀಫ್, ಗ್ರಾಮಸ್ಥರಾದ ರಾಘವೇಂದ್ರ ನೆಟ್ಟಿಬೈಲ್, ಸಿದ್ದಿಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *