Breaking
10 Oct 2026, Sat

ಬೀದರ್: ಕಾರಿಗೆ ಡಿಕ್ಕಿ ಹೊಡೆದು ಕಾಲುವೆಗಿಳಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್: ಹಲವರಿಗೆ ಗಾಯ

ಭಾಲ್ಕಿ: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಣಜಿ ಕ್ರಾಸ್ ಬಳಿ ಕಾರಿಗೆ ಡಿಕ್ಕಿ ಹೊಡೆದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ವೊಂದು ಕಾರಂಜಾ ಕಾಲುವೆಗೆ ಇಳಿದ ಘಟನೆ ಸೋಮವಾರ (ಆ.17) ನಡೆದಿದೆ.

ಹುಮನಾಬಾದ್ ಕಡೆಯಿಂದ ಬೀದರ್ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಬೀದರ್ ಕಡೆಯಿಂದ ಹುಮನಾಬಾದ್ ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ ನಿಯಂತ್ರಣ ತಪ್ಪಿ ಕಾರಂಜಾ ಕಾಲುವೆಗೆ ಇಳಿದಿದೆ.

ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *