Breaking
18 Aug 2026, Tue

ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ವೇಳೆ ದೊಡ್ಡ ಗಾತ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ನಾರಾಯಣ (31) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಸೋಮವಾರ ಪತ್ತೆಯಾಗಿದೆ.


ಆ. 9ರಂದು ‘ಓಷಿಯನ್ ಸ್ಟಾರ್’ ಹೆಸರಿನ ಬೋಟ್ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ದೊಡ್ಡ ಗಾತ್ರದ ಅಲೆ ದೋಣಿಗೆ ಬಡಿದಿತ್ತು. ಈ ಸಂದರ್ಭದಲ್ಲಿ ನಾರಾಯಣ ನಾಪತ್ತೆಯಾಗಿದ್ದರು.


ನಾಪತ್ತೆಯಾಗಿದ್ದ ನಾರಾಯಣ ಅವರಿಗಾಗಿ ಬೋಟ್ ಮಾಲೀಕರು ಹಾಗೂ ಕುಟುಂಬಸ್ಥರು ಕಳೆದ ಎಂಟು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಿಸಲಾಗಿತ್ತು.


ಇದೀಗ ನಾರಾಯಣ ಅವರ ಮೃತದೇಹ ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಪತ್ತೆಯಾಗಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *