ವಿಟ್ಲ: ವಿಟ್ಲ ಸೀಮೆಯ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ನೋಡು ದೀಪೋತ್ಸವ, ಕೆರೆ ಆಯನ ನಡೆಯಿತು.
ಜಾತ್ರೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಬಳಿಕ ನೋಡು ದೀಪೋತ್ಸವ ನಂತರ ತೆಪ್ಪೋತ್ಸವ ನಡೆಯಿತು.

ಸಾಂಸ್ಕೃತಿಕ ವೇದಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ರಾಜೇಶ್ ವಿಟ್ಲ ಸಾರಥ್ಯದಲ್ಲಿ ಆರ್.ಕೆ.ಸಾಂಸ್ಕ್ರತಿಕ ವೈಭವ, ಯಕ್ಷಗಾನ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ನಾಟ್ಯ ಮಯೂರಿ ರಕ್ಷಿತ್ ಶೆಟ್ಟಿ ಪಡ್ರೆ ನಿರ್ದೇಶನದಲ್ಲಿ ಯಕ್ಷಗಾನ ‘ದಾಶರಥಿ ದರ್ಶನ ‘ , ವಿದ್ಯಾರ್ಥಿಗಳಿಂದ ‘ನೃತ್ಯ ಸಂಭ್ರಮ ‘ ಪ್ರದರ್ಶನಗೊಂಡಿತು.


