Breaking
11 Oct 2026, Sun

ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ನಾಪತ್ತೆ

ವಿಜಯನಗರ: ಮೀನು ಹಿಡಿಯಲು ತುಂಗಭದ್ರಾ ನದಿಗೆ ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ.


ನಾಪತ್ತೆಯಾದವರನ್ನು ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಎಂದು ಗುರುತಿಸಲಾಗಿದೆ. ಮೂವರು ನಿನ್ನೆ ಮಧ್ಯಾಹ್ನ ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ಆದರೆ ಸಂಜೆಯಾದರೂ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದಾರೆ.


ಬಳಿಕ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸದ್ಯ ಎಸ್ಡಿಆರ್ಎಫ್ ತಂಡವೂ ತುಂಗಭದ್ರಾ ನದಿ ಹಿನ್ನೀರಿನಲ್ಲಿ ಶೋಧ ಕಾರ್ಯ ಮುಂದುವರಿಸಿದೆ.


ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ನಾಪತ್ತೆಯಾದ ಮೂವರು ಯುವಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *