ಮಂಗಳೂರು: ಮೂಡುಜೆಪ್ಪು, ಕೆಲರಾಯಿ ನಿವಾಸಿ ಹಾಗೂ ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಧರ್ಮಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸ್ವಾಸ್ಥ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಆ.19ರಂದು ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದ ಅವರು ಪರೋಪಕಾರಿ ಸ್ವಭಾವದವರಾಗಿದ್ದು, ನೆರೆಹೊರೆಯವರು ಹಾಗೂ ಪರಿಚಿತರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು.
ಮೃತರು ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಅವರ ತಾಯಿ. ರೋಹನ್ ಸೇರಿದಂತೆ ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ 14 ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಆ.21ರಂದು ಶುಕ್ರವಾರ ಬೆಳಗ್ಗೆ 10.30ಕ್ಕೆ ಕೆಲರಾಯಿಯ ಸಂತ ಅನ್ನಾ ಚರ್ಚ್‌ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಬೆಳಗ್ಗೆ 11 ಗಂಟೆಗೆ ಚರ್ಚ್‌ನಲ್ಲಿ ಪವಿತ್ರ ಬಲಿಪೂಜೆ ನೆರವೇರಲಿದ್ದು, ನಂತರ ಅಂತ್ಯಕ್ರಿಯೆ ನಡೆಯಲಿದೆ.



