Breaking
20 Aug 2026, Thu

ಬಂಟ್ವಾಳ: ತಾಯಿಯ ಅನಾರೋಗ್ಯದಿಂದ ಮನನೊಂದು ಅಪ್ರಾಪ್ತ ಬಾಲಕ ಆತ್ಮಹತ್ಯೆ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನೈನಾಡು ನಿವಾಸಿ ಹಾಗೂ ನೈನಾಡು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಶೋಕ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ(ಆ.19) ಸಂಭವಿಸಿದೆ.

ಬಾಲಕನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ತಂದೆ ಇಲ್ಲದ ಕಾರಣ ತಾಯಿಯೇ ಕುಟುಂಬಕ್ಕೆ ಪ್ರಮುಖ ಆಸರೆಯಾಗಿದ್ದರು. ತಾಯಿಯ ಅನಾರೋಗ್ಯದ ವಿಚಾರವಾಗಿ ಬಾಲಕ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.

ಮೃತ ಬಾಲಕ ಮೂವರು ಗಂಡು ಮಕ್ಕಳಲ್ಲಿ ಕಿರಿಯವನಾಗಿದ್ದ. ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *