Breaking
20 Aug 2026, Thu

ಬ್ರಹ್ಮಾವರದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ: ಪ್ರಯಾಣಿಕರು ಪಾರು

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಗುರುವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.


ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಿರ್ವಾಹಕರು ಕೂಡಲೇ ಎಚ್ಚೆತ್ತುಕೊಂಡು ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಸಮಯಪ್ರಜ್ಞೆಯಿಂದ ನಡೆದುಕೊಂಡ ಪರಿಣಾಮ ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ.


ಪ್ರಾಥಮಿಕ ಮಾಹಿತಿಯಂತೆ ಬಸ್ಸಿನ ಇಡಿಸಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಬಸ್ಸಿಗೆ ವ್ಯಾಪಿಸಿದೆ ಎನ್ನಲಾಗಿದೆ.


ವಿಷಯ ತಿಳಿಯುತ್ತಿದ್ದಂತೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬಸ್ಸಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.


ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Leave a Reply

Your email address will not be published. Required fields are marked *