Breaking
11 Oct 2026, Sun

ಸಾಗರ: ಕಾರು–ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸಾವು

ಸಾಗರ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಬಳಸಗೋಡು ಸಮೀಪ ಆ.19ರ ಬುಧವಾರ ರಾತ್ರಿ ನಡೆದಿದೆ.

ಮೃತರನ್ನು ಸಾಗರ ತಾಲ್ಲೂಕಿನ ಚಿಪ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಅವರ ಪುತ್ರ ಅರ್ಜುನ್ (19) ಎಂದು ಗುರುತಿಸಲಾಗಿದೆ.

ಅರ್ಜುನ್ ಅವರು ಸಾಗರದಿಂದ ಆನಂದಪುರದತ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗ ಕಡೆಯಿಂದ ಸಾಗರದತ್ತ ಬರುತ್ತಿದ್ದ ಎಸ್.ಎನ್. ನಗರ ಮೂಲದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಳಸಗೋಡು ಬಳಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅರ್ಜುನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *