ಬಂಟ್ವಾಳ: ದೇಶದ ಯುವಜನತೆಗೆ ಮತದಾನದ ಹಕ್ಕು ಒದಗಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಉಳುವ ರೈತನಿಗೆ ಭೂಮಿಯ ಒಡೆತನ ನೀಡಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕೊಡುಗೆಗಳು ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿವೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹೇಳಿದರು.

ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರಾದ ಲಾದ್ರು ಮಿನೆಜಸ್ ಹಾಗೂ ಎ.ಬಿ. ಅಬ್ದುಲ್ಲಾ ಕೊಳ್ನಾಡು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ. ಪದ್ಮನಾಭ ರೈ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ. ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಮುಖರಾದ ಚಂದ್ರಶೇಖರ ರೈ ಬೋಳಂತೂರು, ಮಹಮ್ಮದ್ ನಂದಾವರ, ಪ್ರವೀಣ್ ರಾಡ್ರಿಗಸ್, ಸಿರಾಜ್ ಮದಕ, ಮಹಮ್ಮದ್ ಮಂಚಿ, ಸಂದೇಶ್ ಶೆಟ್ಟಿ ವಿಟ್ಲ ಪಡ್ನೂರು, ರಮ್ಲಾನ್ ಅಮುಂಜೆ ಮತ್ತಿತರರು ಭಾಗವಹಿಸಿದ್ದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಸ್ವಾಗತಿಸಿದರು. ಎ.ಬಿ. ಅಬ್ದುಲ್ಲಾ ವಂದಿಸಿದರು.









