Breaking
21 Aug 2026, Fri

ಬಂಟ್ವಾಳ: ಡಿ. ದೇವರಾಜ ಅರಸು ಜನ್ಮದಿನಾಚರಣೆ; ‘ಭೂ ಸುಧಾರಣೆ, ಜೀತ ಪದ್ಧತಿಗೆ ಮುಕ್ತಿ ನೀಡಿದವರು’

ಬಂಟ್ವಾಳ: ಭೂ ಸುಧಾರಣೆ ಕಾಯ್ದೆಯ ಮೂಲಕ ‘ಉಳುವವನೇ ಹೊಲದೊಡೆಯ’ ಎಂಬ ಪರಿಕಲ್ಪನೆಯನ್ನು ಜಾರಿಗೊಳಿಸಿ, ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಜೀತ ಪದ್ಧತಿ ನಿರ್ಮೂಲನೆ ಸೇರಿದಂತೆ ಹಲವು ಸಾಮಾಜಿಕ ಸುಧಾರಣೆಗಳ ಹರಿಕಾರರಾಗಿದ್ದರು ಎಂದು ಉಪನ್ಯಾಸಕಿ ಡಾ. ಪುಟ್ಟಲಕ್ಷ್ಮಮ್ಮ ಹೇಳಿದರು.

ಬಿ.ಸಿ.ರೋಡಿನಲ್ಲಿ ಗುರುವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ತಹಶೀಲ್ದಾರ್ ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಅವರು ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ಶೈಕ್ಷಣಿಕ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಅಲ್ಲದೆ, ದೇವರಾಜ ಅರಸು ಅವರ ಕುರಿತು ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೇಷಗಿರಿ ನಾಯಕ್ ಸ್ವಾಗತಿಸಿದರು. ನಿಲಯಪಾಲಕ ಆನಂದ್ ವಂದಿಸಿದರು. ವಿನುತ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *