Breaking
12 Oct 2026, Mon

ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ್ ಪಿ.ಎಂ. MRPL ಸ್ವಾತಂತ್ರ್ಯ ದಿನಾಚರಣೆಯ ಸ್ಪರ್ಧೆಗಳಿಗೆ ತೀರ್ಪುಗಾರರು

ಮಂಗಳೂರು: ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್ ಪಿ.ಎಂ. ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಭಾಗವಹಿಸಿದರು.

ಶ್ರೀನಿವಾಸ್ ಪಿ.ಎಂ. ಅವರು ಕನ್ನಡ ಚಲನಚಿತ್ರ ನಟರಾಗಿದ್ದು, ಶಿಕ್ಷಣ ಹಾಗೂ ಕಲಾ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಮುಂಬರುವ ಕನ್ನಡ ಚಲನಚಿತ್ರ ‘ಪ್ರೀತಿಯೇ ಉಸಿರು’ ಶೀಘ್ರದಲ್ಲೇ ತೆರೆಕಾಣಲಿದೆ.

Leave a Reply

Your email address will not be published. Required fields are marked *