Breaking
22 Aug 2026, Sat

ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಹಿರಿಯ ನಾಗರಿಕರ ದಿನದ ಅಂಗವಾಗಿ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ವತಿಯಿಂದ ಕ್ಲಬ್ ನ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಘವೇಂದ್ರ ಭಟ್ ಅವರ ತಂದೆ, ಕೃಷಿಕರಾದ ರಾಮಚಂದ್ರ ಭಟ್, ತಾಯಿ ಶಕುಂತಲಾ ಭಟ್ ಹಾಗೂ ಸುಲೋಚನಾ ಭಟ್ ಅವರನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.


ಸಮಾರಂಭದಲ್ಲಿ ಹಿರಿಯ ನಾಗರಿಕರ ಸಮಾಜಮುಖಿ ಸೇವೆ, ಜೀವನಾನುಭವ ಹಾಗೂ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಅವರು ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಹಿರಿಯರ ಅನುಭವ, ಮಾರ್ಗದರ್ಶನ ಮತ್ತು ಮೌಲ್ಯಗಳು ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಿದ್ದು, ಸಮಾಜದ ಅಭಿವೃದ್ಧಿಗೆ ಸದಾ ದಾರಿದೀಪವಾಗಿವೆ ಎಂದು ಉಪಸ್ಥಿತರು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಅಧ್ಯಕ್ಷೆ ಗೀತಾ ಬಲ್ಲಾಳ್, ಕಾರ್ಯದರ್ಶಿ ರೂಪ ರಾಜೇಶ್ ಶೆಟ್ಟಿ, ಸದಸ್ಯರಾದ ರಮೇಶ್ ನಾಯಕ್, ನಯನತಾರಾ ಭಟ್, ಹರಿಪ್ರಸಾದ್ ಶೆಟ್ಟಿ ಹಾಗೂ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.


ಹಿರಿಯ ನಾಗರಿಕರ ಸೇವೆ, ತ್ಯಾಗ ಮತ್ತು ಜೀವನ ಸಾಧನೆಯನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು. ಹಿರಿಯರನ್ನು ಸನ್ಮಾನಿಸುವ ಮೂಲಕ ಅವರ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುವ ಉತ್ತಮ ವೇದಿಕೆಯಾಗಿದೆ ಎಂದು ಸದಸ್ಯರು ತಿಳಿಸಿದರು.

Leave a Reply

Your email address will not be published. Required fields are marked *