ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ವೇಣೂರು ನಿವಾಸಿ ಜಮಾಲುದ್ದೀನ್ ಎಂದು ಗುರುತಿಸಲಾಗಿದೆ. ಕೆಲವು ತಿಂಗಳುಗಳಿಂದ ಆರೋಪಿ ತನ್ನ ರಿಕ್ಷಾದಲ್ಲಿ ಬಾಲಕಿಯನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ.
ಈ ವೇಳೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದ್ದು, ಬಾಲಕಿ ಇದಕ್ಕೆ ಪ್ರತಿರೋಧಿಸಿದಾಗ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬೆದರಿಕೆಯಿಂದ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎಂದು ಹೇಳಲಾಗಿದೆ.

ಆ.13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಮನೆಗೆ ಬಂದು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.



