Breaking
22 Aug 2026, Sat

ಕಣಿಯೂರು: ಆ.23 ಶಾಸಕ ಹರೀಶ್ ಪೂಂಜ ಅವರಿಗೆ ಗೌರವಾಭಿನಂದನೆ-2026

ಕಣಿಯೂರು: ಕರ್ನಾಟಕ ಟಿವಿ ವತಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಆ.23ರಂದು ನಡೆಯಲಿದೆ.

ಬಂದಾರು–ಮೊಗ್ರು–ಕಣಿಯೂರು ಗ್ರಾಮದ ಹರೀಶ್ ಪೂಂಜಾ ಅಭಿನಂದನಾ ಸಮಿತಿ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವು ಆ.23ರಂದು ಬೆಳಗ್ಗೆ 11 ಗಂಟೆಗೆ ಪದ್ಮುಂಜ ಸಿ.ಎ. ಬ್ಯಾಂಕ್ ರೈತ ಸಭಾಭವನದಲ್ಲಿ ನಡೆಯಲಿದೆ.

ಬಂದಾರು, ಮೊಗ್ರು ಹಾಗೂ ಕಣಿಯೂರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳು ಹಾಗೂ ಗ್ರಾಮಸ್ಥರ ಪರವಾಗಿ ಶಾಸಕ ಹರೀಶ್ ಪೂಂಜ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಕಾರ್ಯಕ್ರಮಕ್ಕೆ ಸಮಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹರೀಶ್ ಪೂಂಜಾ ಅಭಿನಂದನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *