ಸಿದ್ದಕಟ್ಟೆ: 2025–26ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಅವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿ ಸಾಧನ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ, ಜಯರಾಮ ರೈ, ಸದಾಶಿವ ಉಳ್ಳಾಲ್ ಸೇರಿದಂತೆ ಎಲ್ಲಾ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್ ಹಾಗೂ ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು.





