Breaking
24 Aug 2026, Mon

ಸಹಕಾರ ಸಂಘಗಳು ಹುಣಕಾಸು ವ್ಯವಹಾರದೊಂದಿಗೆ ಸಾಮಾಜಿಕ ಚಟುವಟಿಕೆಗಳಿಗೆ ನೆರವಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ: ಕಿರಣ್ ಕುಮಾರ್ ಮಂಜಿಲ

ಸಿದ್ದಕಟ್ಟೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕೃಷಿ ಸಾಲ ನೀಡುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಿಗೆ ಸಹಕಾರ ನೀಡಿದಾಗ ಸಮಾಜದ ಸಮಗ್ರ ಅಭಿವೃದ್ಧಿಗೆ ಪೂರಕವಾಗಲು ಸಾಧ್ಯ ಎಂದು ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ ಹೇಳಿದರು.

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಳಾಂತರಗೊಂಡ ಆರಂಬೊಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಚೇರಿ ಉದ್ಘಾಟಿಸಿ ಮಾತನಾಡಿದ ಆರಂಬೊಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಗತ್ಪಾಲ ಶೆಟ್ಟಿ, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಆರಂಬೊಡಿ ಗ್ರಾಮದ ಹೊಕ್ಕಾಡಿ ಭಾಗದಲ್ಲಿ ಸಹಕಾರ ಸಂಘದ ಶಾಖೆ ಆರಂಭಿಸಿರುವುದು ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರಿಗೆ ಇನ್ನಷ್ಟು ಸೇವೆಗಳು ದೊರೆಯಲಿ ಎಂದು ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಚ್. ಪ್ರಭಾಕರ್ ಮಾತನಾಡಿ, ಆರಂಬೊಡಿ ಶಾಖೆಯನ್ನು ಮುಂದಿನ ದಿನಗಳಲ್ಲಿ ಸ್ವತಂತ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನಾಗಿ ರೂಪಿಸುವಂತೆ ಗ್ರಾಮಸ್ಥರ ಪರವಾಗಿ ಬೇಡಿಕೆ ಸಲ್ಲಿಸಿದರು.

ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೋಡುಂಬ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ದಿನೇಶ್ ಪೂಜಾರಿ ಹುಲಿಮೆರು, ರಶ್ಮಿತ್ ಶೆಟ್ಟಿ, ಶಿವ ಗೌಡ, ವೀರಪ್ಪ ಪರವ, ವಿಶ್ವನಾಥ್ ಶೆಟ್ಟಿಗಾರ್, ಜಾರಪ್ಪ ನಾಯ್ಕ, ಮಂದಾರತಿ ಶೆಟ್ಟಿ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಚಂದ್ರಶೇಖರ ಶೆಟ್ಟಿ ಅರಳ, ಪುಷ್ಪಲತಾ, ಮಾಜಿ ನಿರ್ದೇಶಕ ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ರಮೇಶ್ ಪೂಜಾರಿ ಮಂಜಿಲ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು,ಆರಂಬೊಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ಶೆಟ್ಟಿ ಪ್ರಮುಖರಾದ ರಾಘವೇಂದ್ರ ಭಟ್, ಬಾಬುರಾಜೇಂದ್ರ ಶೆಟ್ಟಿ, ಧನಂಜಯ ಜೈನ್, ಸತೀಶ್ ಶೆಟ್ಟಿ, ಬಾಬು ಪೂಜಾರಿ, ರಮೇಶ್ ಪೂಜಾರಿ, ಪ್ರತಾಪ್ ಶೆಟ್ಟಿ, ಉಮೇಶ್ ಶೆಟ್ಟಿ ಪಾಳ್ಯ, ರತ್ನಾಕರ ಶೆಟ್ಟಿ ಬೂಬ ಮಾಸ್ಟರ್, ವಕೀಲರಾದ ಶಿವಯ್ಯ, ಸರಿತಾ ಅಲ್ವಾ, ಸುನೀತಾ, ಭಾಗವಹಿಸಿದ್ದರು.

ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *