Breaking
25 Aug 2026, Tue

ಮಡಂತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಪ್ರಶಸ್ತಿ

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮವು ಆಗಸ್ಟ್ 23ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಯಾಗಿರುವ ಹಾಗೂ ಭರತನಾಟ್ಯ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಮಡಂತ್ಯಾರಿನ ಕು. ಶಾನ್ವಿ ಪೂಜಾರಿ ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ಕರಾಟೆ ಪಟುವಾಗಿ ಗುರುತಿಸಿಕೊಂಡಿರುವ ಕು. ಶ್ರೇಯಸ್ ಪೂಜಾರಿ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಪುರಸ್ಕಾರ ನೀಡಿ ಗೌರವಿಸಲಾಯಿತು.

ದೇಶಭಕ್ತಿ, ಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಡಂತ್ಯಾರಿನ ಈ ಇಬ್ಬರು ಪ್ರತಿಭೆಗಳಿಗೆ ದೊರೆತ ಗೌರವವು ಸ್ಥಳೀಯವಾಗಿ ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆಗೆ ಮತ್ತೊಂದು ಮುಕುಟವನ್ನು ತೊಡಿಸಿದಂತಾಗಿದೆ.

Leave a Reply

Your email address will not be published. Required fields are marked *