ಬಂಟ್ವಾಳ: ಇಲ್ಲಿನ ಕೊಯಿಲ ಗ್ರಾಮದ ಪರಾರಿ ಮನೆ ನಿವಾಸಿ, ಹಿರಿಯ ಪ್ರಗತಿಪರ ಕೃಷಿಕ ನೋಣಯ್ಯ ಶೆಟ್ಟಿಗಾರ್ (87) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನೋಣಯ್ಯ ಶೆಟ್ಟಿಗಾರ್ ಅವರು ಪ್ರಗತಿಪರ ಕೃಷಿಕರಾಗಿ, ಜಿಲ್ಲಾ ಪದ್ಮಶಾಲಿ ಮಹಾಸಭಾದ ಉಪಾಧ್ಯಕ್ಷರಾಗಿ, ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಳದ ಟ್ರಸ್ಟಿಯಾಗಿ, ಕ್ರೀಡೋತ್ಸವ ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿ ಹಾಗೂ ಕೈತ್ರೋಡಿ ಕ್ವಾರ್ಟರ್ಸ್ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿಯ ಸ್ಥಾಪಕ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ 4 ಗಂಟೆಗೆ ಸ್ವಗೃಹದ ಸಮೀಪ ನೆರವೇರಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.




