ಬ್ರಹ್ಮಾವರ: ಯುವ ಸ್ಯಾಕ್ಸೋಫೋನ್ ವಾದಕಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ನಮೃತಾ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ನಮೃತಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.



