Breaking
13 Oct 2026, Tue

ಗರ್ಡಾಡಿ: ಪೊಂಜಿಲ ರಸ್ತೆ ಕಾಂಕ್ರೀಟಿಕರಣಕ್ಕೆ ರೂ.10 ಲಕ್ಷ ಅನುದಾನ

ಗರ್ಡಾಡಿ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ರೂ.10 ಲಕ್ಷ ಅನುದಾನ ಒದಗಿಸಲಾಗಿದೆ.

ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ಬೇಡಿಕೆ ಸಲ್ಲಿಸುತ್ತಿದ್ದ ಸ್ಥಳೀಯರ ಮನವಿಗೆ ಸ್ಪಂದಿಸಿ ಅನುದಾನ ಒದಗಿಸಿರುವ ಶಾಸಕರಿಗೆ ಪೊಂಜಿಲ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *