Breaking
13 Oct 2026, Tue

ಕೋಟ: ಟ್ರಾನ್ಸ್‌ಫಾರ್ಮರ್‌ಗೆ ಕಾರು ಢಿಕ್ಕಿ; ಪ್ರಯಾಣಿಕನಿಗೆ ಗಾಯ

ಕೋಟ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕ ಗಾಯಗೊಂಡ ಘಟನೆ ಕೋಟ ಮೂರುಕೈ ಸಮೀಪ ಮಂಗಳವಾರ (ಆ.25) ಬೆಳಗಿನ ಜಾವ ನಡೆದಿದೆ.

ಮೂಡುಗರೆ ನಿವಾಸಿ ಹರೀಶ್ ಕಾರು ಚಲಾಯಿಸುತ್ತಿದ್ದು, ಮುರುಡೇಶ್ವರದಿಂದ ಮೂಡುಗರೆಗೆ ತೆರಳುತ್ತಿದ್ದ ವೇಳೆ ಕೋಟ ಮೂರುಕೈ ಸಮೀಪ ಕಾರು ನಿಯಂತ್ರಣ ತಪ್ಪಿ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಕಾರು ಹಾಗೂ ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿದೆ. ಘಟನೆಯ ಮಾಹಿತಿ ತಿಳಿದು ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ತಗಲುವ ವೆಚ್ಚವನ್ನು ಭರಿಸುವುದಾಗಿ ಕಾರಿನ ಚಾಲಕ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *