Breaking
26 Aug 2026, Wed

ಆಂಬುಲೆನ್ಸ್ ಡಿವೈಡರ್ ಗೆ ಡಿಕ್ಕಿ: ರೋಗಿ ಮೃತ್ಯು, ನಾಲ್ವರಿಗೆ ಗಾಯ

ಕಾಸರಗೋಡು: ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ರೋಗಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಬಂದ್ಯೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.


ಅಡ್ಕ ನಿವಾಸಿ ಅಶೋಕ್ (41) ಮೃತಪಟ್ಟವರು. ಅವರ ಪತ್ನಿ ಪ್ರತಿಭಾ, ಸಹೋದರ ರಾಜೇಶ್, ರಾಜೇಶ್ ಅವರ ಪತ್ನಿ ಹಾಗೂ ಆಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ.


ಅನಾರೋಗ್ಯದ ಹಿನ್ನೆಲೆಯಲ್ಲಿ ಅಶೋಕ್ ಅವರು ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ಬಂದ್ಯೋಡು ಸಮೀಪ ಅಪಘಾತ ಸಂಭವಿಸಿದೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಶೋಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಏಕೈಕ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *