Breaking
14 Oct 2026, Wed

ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

ಬೆಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಜೀವನ ಬಿಮಾ ನಗರ ಠಾಣಾ ವ್ಯಾಪ್ತಿಯ ವಿಜ್ಞಾನ ನಗರದಲ್ಲಿ ನಡೆದಿದೆ.

ಮೃತರನ್ನು ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ನವೀನ್ (33) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ನವೀನ್ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ವಿಜ್ಞಾನ ನಗರದ ಸಿಗ್ನಲ್‌ನಲ್ಲಿ ವಾಹನ ನಿಲ್ಲಿಸಿಕೊಂಡಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ನವೀನ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

ಅಪಘಾತಕ್ಕೆ ಕಾರಣವಾದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಜೀವನ ಬಿಮಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *