Breaking
14 Oct 2026, Wed

ಪುತ್ತೂರು: ಬ್ರೇಕ್ ಫೇಲ್‌ ಆದ ಕೆಎಸ್‌ಆರ್‌ಟಿಸಿ ಬಸ್‌; ಮನೆಯ ಕಾಂಪೌಂಡ್‌ಗೆ ಡಿಕ್ಕಿ, ತಪ್ಪಿದ ಭಾರಿ ಅನಾಹುತ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನ ಬ್ರೇಕ್‌ ವೈಫಲ್ಯಗೊಂಡು ನಿಯಂತ್ರಣ ತಪ್ಪಿದ ಬಸ್‌ ಮನೆಯೊಂದರ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಬುಧವಾರ(ಆ.26) ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತ ದಾಟಿ ಸೇಂಟ್‌ ಫಿಲೋಮಿನಾ ಕಾಲೇಜು ಸಮೀಪಿಸುತ್ತಿದ್ದ ವೇಳೆ ದಿಢೀರ್‌ ಬ್ರೇಕ್‌ ವೈಫಲ್ಯಗೊಂಡಿದೆ ಎನ್ನಲಾಗಿದೆ.

ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಮನೆಯೊಂದರ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ನಿಂತಿದೆ.

ಘಟನೆ ವೇಳೆ ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಅಪಘಾತದಿಂದ ಬಸ್‌ ರಸ್ತೆಗೆ ಅಡ್ಡಲಾಗಿ ನಿಂತಿದ್ದರಿಂದ ಕ್ರೇನ್‌ ಸಹಾಯದಿಂದ ಬಸ್‌ ತೆರವುಗೊಳಿಸಲಾಯಿತು.

Leave a Reply

Your email address will not be published. Required fields are marked *