ಸುಳ್ಯ: ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್ (ಟಿಟಿ) ವಾಹನದ ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ(ಆ.26) ಸಂಜೆ ನಡೆದಿದೆ.

ಗುಜರಾತ್‌ನ ಅಹಮದಾಬಾದ್‌ನ ಪ್ರವಾಸಿಗರ ತಂಡವೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದ ವೇಳೆ, ಸುಳ್ಯ ಕಡೆಗೆಸಂಚರಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ನೇರವಾಗಿ ಟಿಟಿ ಮೇಲೆ ಉರುಳಿ ಬಿದ್ದಿದೆ.

ಟಿಟಿಯಲ್ಲಿದ್ದ ಏಳು ಪ್ರವಾಸಿಗರ ಪೈಕಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಪಘಾತದ ಬಳಿಕ ಕ್ರೇನ್ ಸಹಾಯದಿಂದ ಉರುಳಿಬಿದ್ದ ಲಾರಿಯನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.






