Breaking
14 Oct 2026, Wed

ನಿಂತಿದ್ದ ಟಾಟಾ ಎಸ್ ಗೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ನಿಂತಿದ್ದ ಟಾಟಾ ಎಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.


ನರಗುಂದ ಮೂಲದ ಮೂವರು ಯುವಕರು ಬೈಕ್ನಲ್ಲಿ ನರಗುಂದದಿಂದ ಕೊಪ್ಪಳದತ್ತ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಮೃತರನ್ನು ಮಾಬೂಸಾಬ್ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ.


ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *